Panchayat Raj Commissionerate - Karnataka retweeted
Such a delightful sight! A group of elderly women and young girls toss a ball around!
Rural public libraries are community hubs for interaction and fun!
Video from a rural library in Nelogi, Taluk Jewargi, Kalburgi district. 🌷🌱🕊️
Panchayat Raj Commissionerate - Karnataka retweeted
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ - ಪ್ರಗತಿಯ ರಥ
ನೇರ ಪ್ರಸಾರ
youtube.com/live/I_ZM9NBfJ0o…
Panchayat Raj Commissionerate - Karnataka retweeted
ತರೀಕೆರೆ ತಾಲೂಕಿನ ಸಿದ್ಧರಹಳ್ಳಿ ಗ್ರಾಮ ಪಂಚಾಯಿತಿ ಅರಿವು ಕೇಂದ್ರದಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರದಲ್ಲಿ ಅಧ್ಯಯನ್ ಫೌಂಡೇಶನ್‌ನ ಸಹಯೋಗದಲ್ಲಿ ಮಕ್ಕಳಿಗಾಗಿ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಾಗಾರದಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿ ವಿವಿಧ ಸೃಜನಾತ್ಮಕ, ಮನರಂಜನಾ ಹಾಗೂ ಕಲಿಕಾ ಚಟುವಟಿಕೆಗಳಲ್ಲಿ ತೊಡಗಿಕೊಂಡರು.
Panchayat Raj Commissionerate - Karnataka retweeted
ಗ್ರಾಮೀಣ ಭಾಗದ ಜನತೆ ಸುಲಭವಾಗಿ ತಮ್ಮ ಜಮೀನಿನ ಇ-ಖಾತೆಯನ್ನು ಪಡೆಯುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇ-ಸ್ವತ್ತು ತಂತ್ರಾಂಶ 2.0 ಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ ಒಟ್ಟು 8,886 ಅರ್ಜಿಗಳನ್ನು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ತಂತ್ರಾಂಶ ಸಿದ್ಧಪಡಿಸಿರುವ ಎನ್.ಐ.ಸಿ ತಂತ್ರಾಂಶದ ದೋಷದಿಂದಾಗಿ ಕೆಲವೊಂದು ಅರ್ಜಿಗಳನ್ನು ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳನ್ನು ಸರಿಪಡಿಸಲು ಕ್ರಮಕೈಗೊಳ್ಳಲಾಗುತ್ತಿದೆ.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶ 2.0 ವನ್ನು ನಿಯಮಗಳನ್ವಯ ಮಾರ್ಪಡು ಮಾಡಲಾಗಿದ್ದು, ಸಾರ್ವಜನಿಕರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಲಾಗಿನ್ ಸೃಜಿಸಲಾಗಿರುತ್ತದೆ. ಇ-ಸ್ವತ್ತು ತಂತ್ರಾಂಶ 2.0 ಅನ್ನು ʼಭೂಮಿʼ, ʼಕಾವೇರಿʼ ʼಪಂಚತಂತ್ರʼ ʼಮೋಜಿಣಿʼ ಹಾಗೂ 'ಎಸ್ಕಾಂ'ಗಳ ತಂತ್ರಾಂಶಗಳೊಂದಿಗೆ ಸಂಯೋಜಿಸಲಾಗಿರುತ್ತದೆ. ಸದರಿ ಸಂಯೋಜನೆಯಿಂದ ತಾಂತ್ರಿಕ ಸಮಸ್ಯೆಗಳು/API ಸಮಸ್ಯೆಗಳು ಉಂಟಾಗಿದೆ.
ನಿಯಮಗಳಿಗೆ ಹಾಗೂ ಇ-ಸ್ವತ್ತು ತಂತ್ರಾಂಶದ ಬಳಕೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಸಹಾಯಕ್ಕಾಗಿ ಇಲಾಖೆ ವತಿಯಿಂದ ಸಹಾಯವಾಣಿ ಸಂಖ್ಯೆ 9483476000 ಅನ್ನು ಪ್ರಾರಂಭಿಸಲಾಗಿದೆ. ಪ್ರತಿದಿನ ಸರಾಸರಿ ಮೂರು ಸಾವಿರಕ್ಕೂ ಹೆಚ್ಚು ಕರೆಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಗುತ್ತಿದೆ. ಅದೇ ರೀತಿ ಜಿಲ್ಲಾ ಸಹಾಯವಾಣಿಗಳನ್ನು ಪ್ರಾರಂಭಿಸಲಾಗಿದ್ದು, ಜಿಲ್ಲಾ ಸಹಾಯವಾಣಿಗಳ ಸಂಖ್ಯೆಯನ್ನು eswathu.karnataka.gov.in/Log… ರಲ್ಲಿ “ಸಂಪರ್ಕಿಸಿ” ಶೀರ್ಷಿಕೆಯಡಿ ಹಾಗೂ panchatantra.karnataka.gov.i… ರಲ್ಲಿ ಪ್ರಕಟಿಸಲಾಗಿದೆ. ಅಲ್ಲದೆ ಸಹಾಯವಾಣಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಈಗಾಗಲೇ ತರಬೇತಿಯನ್ನು ನೀಡಲಾಗಿದ್ದು, ಮತ್ತೊಮ್ಮೆ ಪುನಶ್ಚೇತನ ತರಬೇತಿಯನ್ನು ಆಯೋಜಿಸಲಾಗಿದೆ.
ಇ-ಸ್ವತ್ತು ಆನ್‌ಲೈನ್ ಅರ್ಜಿಗಳಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಲಾಗುತ್ತಿದೆ. ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಿಸಲು ಕ್ರಮವಹಿಸಲಾಗುತ್ತಿದೆ. ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಯಾವುದೇ ಕಾಲಾವಧಿಯನ್ನು ನಿಗದಿಪಡಿಸಲಾಗಿರುವುದಿಲ್ಲ, ಆದ್ದರಿಂದ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ. ಇ-ಸ್ವತ್ತು ತಂತ್ರಾಂಶ 2.0 ರಲ್ಲಿ ಸಲ್ಲಿಸುವ ಅರ್ಜಿಗಳನ್ನು ನಿಯಮಗಳ ಅನ್ವಯ ಪರಿಶೀಲಿಸಿ ನಮೂನೆಗಳನ್ನು ವಿತರಿಸಲು ಕ್ರಮವಹಿಸಲಾಗುತ್ತಿದ್ದು, ಇಲಾಖೆಯೊಂದಿಗೆ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಈ ಮೂಲಕ ಕೋರುತ್ತೇನೆ.
Panchayat Raj Commissionerate - Karnataka retweeted
First of the Akka Cafes launched today. Hope you will visit soon! Let's support women-run small businesses today and every day! #womenslivelihoods #womensday
Panchayat Raj Commissionerate - Karnataka retweeted
ಕರ್ನಾಟಕ ಕಾಂಗ್ರೆಸ್ ಸರ್ಕಾರದ 2024 - 25ನೇ ಸಾಲಿನ ಬಜೆಟ್ ಶ್ರೀಸಾಮಾನ್ಯನ ಪರವಾದ, ಆರ್ಥಿಕ ಶಿಸ್ತಿನ ಹಾಗೂ ಕರ್ನಾಟಕವನ್ನು ಮತ್ತೊಮ್ಮೆ ಪ್ರಗತಿಯ ಪಥದಲ್ಲಿ ಮುನ್ನಡೆಸುವ ಬಜೆಟ್ ಆಗಿದೆ.
ಈ ಆಯವ್ಯಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಘೋಷಣೆಗಳು ಹೀಗಿವೆ
- ₹5,200 ಕೋಟಿ.ವೆಚ್ಚದಲ್ಲಿ 189 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ 50 ಕಿ.ಮೀ. ನಂತೆ ಒಟ್ಟಾರೆಯಾಗಿ 9,450 ಕಿ.ಮೀ. ಉದ್ದದ ಸಂಪರ್ಕ ರಸ್ತೆಗಳ ಅಭಿವೃದ್ಧಿ
- ಕಲ್ಯಾಣ ಪಥ ಯೋಜನೆಯಡಿ ₹1,000 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಒಟ್ಟು 1,150 ಕಿ.ಮೀ. ರಸ್ತೆಗಳ ಅಭಿವೃದ್ಧಿ
- 2024-25ನೇ ಸಾಲಿನಲ್ಲಿ 16 ಕೋಟಿ ಮಾನವ-ದಿನಗಳನ್ನು ಸೃಷ್ಟಿಸಿ, ಸುಮಾರು 30 ಲಕ್ಷ ಕುಟುಂಬಗಳಿಗೆ ಉದ್ಯೋಗ ನೀಡುವ ಗುರಿ (1/n)
#NammaBudget2024
Panchayat Raj Commissionerate - Karnataka retweeted
ವಿಶೇಷವಾಗಿ ಈ ಬಜೆಟ್ ನಲ್ಲಿ
- ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ಪ್ರದೇಶದ ಪ.ಜಾತಿ ಮತ್ತು ಪ.ಪಂಗಡದವರಿಗೆ ದಾಖಲೆಗಳನ್ನು ಡಿಜಿಲಾಕರ್ ಆಪ್‌ನಲ್ಲಿ ಸುರಕ್ಷಿತವಾಗಿರಿಸಲು ನನ್ನ ಗುರುತು ಅಭಿಯಾನವನ್ನು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ 1,000 ಗ್ರಾಮ ಪಂಚಾಯತಿಗಳಲ್ಲಿ ಹಮ್ಮಿಕೊಳ್ಳಲು ನಿರ್ಧಾರ
- ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಬೇಕಾದ ಅನುದಾನದ ಸೂತ್ರಗಳ ಬಗ್ಗೆ ಅಧ್ಯಯನ ನಡೆಸಿ, ಸೂಕ್ತ ಶಿಫಾರಸ್ಸು ಮಾಡಲು 5ನೇ ರಾಜ್ಯ ಹಣಕಾಸು ಆಯೋಗ ರಚನೆ. ಆಯೋಗದಿಂದ ಸ್ವೀಕೃತವಾಗುವ ಶಿಫಾರಸ್ಸುಗಳನ್ನು ಸರ್ಕಾರವು ಪ್ರಾಮಾಣಿಕವಾಗಿ ಪರಿಶೀಲಿಸಿ, ಸ್ಥಳೀಯ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ಕ್ರಮ.
ಈ ಘೋಷಣೆಗಳು ಕರ್ನಾಟಕದ ಸಮಗ್ರ ಪ್ರಗತಿಯ ರಹದಾರಿಗೆ ಕಾರಣವಾಗಲಿವೆ. (n/n)
#NammaBudget2024
Panchayat Raj Commissionerate - Karnataka retweeted
ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಸುಸ್ಥಿರವಾಗಿ ನಿರ್ವಹಿಸಲು
- ತ್ಯಾಜ್ಯವನ್ನು ಕಡಿಮೆ ಮಾಡುವ, ಪುನಃ ಬಳಸುವ ಮತ್ತು ಮರಳಿ ಉಪಯೋಗಿಸುವ ತತ್ವಗಳಾಧಾರಿತ ವರ್ತುಲ ಆರ್ಥಿಕತೆ (Circular Economy) ಮಾದರಿಗೆ ಪ್ರಸಕ್ತ ಸಾಲಿನಿಂದ ಪ್ರೋತ್ಸಾಹ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ಚುನಾಯಿತ ಸದಸ್ಯರಿಗೆ ಮತ್ತು ಒಕ್ಕೂಟಗಳ ಸದಸ್ಯರಿಗೆ ತರಬೇತಿ ನೀಡಿ, ದೇಶದ ಪ್ರಪ್ರಥಮ ವರ್ತುಲ ಆರ್ಥಿಕತೆಯ (Circular Economy) ಪ್ರಯೋಗಾಲಯವನ್ನು ಸ್ಥಾಪಿಸಲು ₹2 ಕೋಟಿ ಒದಗಿಸಲಾಗುವುದು.
- ಜೀತ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಂಡ ಕಾರ್ಮಿಕರ ಪುನರ್ವಸತಿಗಾಗಿ ನೀಡುವ ಮಾಸಿಕ ಪ್ರೋತ್ಸಾಹಧನವನ್ನು₹ 2,000 ಹೆಚ್ಚಳ (6/n)
#NammaBudget2024
Panchayat Raj Commissionerate - Karnataka retweeted
ಈ ಬಜೆಟ್ ನಲ್ಲಿ ಗ್ರಾಮೀಣ ಭಾಗದ ಅಭಿವೃದ್ದಿಗೆ ಪೂರಕವಾಗುವಂತಹ ಅಂಶಗಳನ್ನು ಒಳಗೊಂಡಿದೆ
- ಅರಿವು ಕೇಂದ್ರಗಳನ್ನು ಬಲಪಡಿಸುವ ದೃಷ್ಟಿಯಿಂದ ₹132 ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ, ಪುಸ್ತಕಗಳು, ಡಿಜಿಟಲ್ ಉಪಕರಣಗಳು ಹಾಗೂ ವಿಶೇಷಚೇತನ ಸ್ನೇಹಿ ಉಪಕರಣಗಳ ಖರೀದಿ
- ಜಲಾನಯನ ಇಲಾಖೆಯ ಒಗ್ಗೂಡಿಸುವಿಕೆಯೊಂದಿಗೆ 5,000 ಎಕರೆ ಸವಳು-ಜವಳು ಭೂಮಿಯನ್ನು ಸುಧಾರಿಸುವುದು ಮತ್ತು ಪ್ರತಿ ತಾಲ್ಲೂಕಿಗೆ ಕನಿಷ್ಠ 2 ರಂತೆ ಬೂದು ನೀರು ಸಂಸ್ಕರಣಾ ಘಟಕಗಳನ್ನು ನಿರ್ಮಾಣ ಮಾಡುವ ಗುರಿ (5/n)
#NammaBudget2024
Panchayat Raj Commissionerate - Karnataka retweeted
ಮುಂದುವರೆದು,
- ಹಿರಿಯ ನಾಗರಿಕ ಆರೈಕೆ ಮತ್ತು ಚಿಕಿತ್ಸೆಗಾಗಿ ಪ್ರಸಕ್ತ ಸಾಲಿನಿಂದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಆರೈಕೆ-ಉಪಶಮನ ಕೇಂದ್ರಗಳ ಪ್ರಾರಂಭ
- ಸ್ವಸಹಾಯ ಗುಂಪು, ಗ್ರಾಮ ಪಂಚಾಯಿತಿಗಳ ಮಹಿಳಾ ಸದಸ್ಯರು, ಗ್ರಾಮೀಣ ಭಾಗದ ಮುಂಚೂಣಿ ಕಾರ್ಯಕರ್ತೆಯರಿಗೆ ಪ್ರೇರಣಾ ಯೋಜನೆಯಡಿ ಮುಟ್ಟಿನ ಕಪ್ ಬಳಕೆಗೆ ಪ್ರೋತ್ಸಾಹ
- ರಾಜ್ಯದ 100 ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಲು 'ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ' ಪ್ರಾರಂಭ
- ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತಲಾ ₹1 ಲಕ್ಷ ನೆರವಿನೊಂದಿಗೆ SHG ಗಳ ಸಹಯೋಗದೊಂದಿಗೆ ಎಣ್ಣೆ ಗಾಣ ಸ್ಥಾಪನೆ (4/n)
#NammaBudget2024
Panchayat Raj Commissionerate - Karnataka retweeted
ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್ ಬಳಕೆಯ ಮೇಲೆ ನಿಗಾವಹಿಸಲು ಹಾಗೂ ವಿದ್ಯುತ್ ವೆಚ್ಚ ಕಡಿಮೆ ಮಾಡಲು ಪ್ರಾಯೋಗಿಕವಾಗಿ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು
- 50 ಗ್ರಾಮ ಪಂಚಾಯಿತಿಗಳಲ್ಲಿ ಹೊಂಬೆಳಕು ಕಾರ್ಯಕ್ರಮದಡಿ ₹25 ಕೋಟಿ ವೆಚ್ಚದಲ್ಲಿ ಸೋಲಾರ್ ದೀಪಗಳನ್ನು ಅಳವಡಿಸಲಾಗುವುದು
- 200 ಗ್ರಾಮ ಪಂಚಾಯಿತಿಗಳಲ್ಲಿ ಬೀದಿ ದೀಪಗಳ ವ್ಯವಸ್ಥಿತ ಮೀಟರಿಂಗ್ ಮಾಡಲಾಗುವುದು. (3/n)
#NammaBudget2024
Panchayat Raj Commissionerate - Karnataka retweeted
ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಲಾಗುವ 5 ಉಪ ಕ್ರಮಗಳು
- ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸಲು ನಿರ್ಧಾರ
- ಗ್ರಾಮ ಪಂಚಾಯಿತಿಗಳ ಸಂಪನ್ಮೂಲಗಳನ್ನು ಹೆಚ್ಚಿಸುವ ಸಲುವಾಗಿ ಗ್ರಾಮ ಪಂಚಾಯಿತಿ ಸ್ವತ್ತುಗಳ Asset Monetisation ನೀತಿ ಜಾರಿ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಪ್ರಾರಂಭ
- ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ ಎಲ್ಲಾ ಸರ್ಕಾರಿ ಸೇವೆಗಳನ್ನು ಈ ವರ್ಷದಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಪ್ರಾರಂಭ
- ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿಗದಿತ ಶುಲ್ಕ ಪಾವತಿಯೊಂದಿಗೆ ವ್ಯವಹಾರ ಪರವಾನಗಿಗಳ ಸ್ವಯಂಚಾಲಿತ ನವೀಕರಣಕ್ಕೆ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ಜಾರಿ
- ಗ್ರಾಮ ಪಂಚಾಯಿತಿಗಳ ಸಭೆಗಳು ಮತ್ತು ಗ್ರಾಮ ಸಭೆಗಳ ಕಾರ್ಯಕಲಾಪಗಳ ನೇರ ಪ್ರಸಾರ (2/n)
#NammaBudget2024
Panchayat Raj Commissionerate - Karnataka retweeted
Following the philosophy of “Arive Guru,” I am happy to see our rural libraries are undergoing a transformation as “Arivu Kendras” - knowledge centres for rural Karnataka, to build the foundation of an informed and empowered society.
@PriyankKharge
@readingkafka
Panchayat Raj Commissionerate - Karnataka retweeted
Commendable initiative by CEO Uttara Kannada Zilla Panchayat, Ishwar Kandoo & team!
Panchayat Raj Commissionerate - Karnataka retweeted
Very excited about this women SHG-led Siddi community stay project shortly to be launched in Idagundi, Uttara Kannada district. #ecotourism #local #womenslivelihoods
Panchayat Raj Commissionerate - Karnataka retweeted
ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಹೊಸಕೆರೆ ಗ್ರಾಮ ಪಂಚಾಯತಿಯ ಸದಸ್ಯರು ಕೂಸಿನ ಮನೆ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ತಿಳಿಸಿದ್ದಾರೆ.
Panchayat Raj Commissionerate - Karnataka retweeted
Delighted to share that the project on rejuvenating rural public libraries has won the @nexusofgood
award.
Thank you @PriyankKharge Hon'ble Minister RDPR for the leadership and vision.
Congratulations Priyanka Francis @CommrPR
& RDPR team for hard work & meticulous follow up.
Panchayat Raj Commissionerate - Karnataka retweeted
ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನರೇಗಾ ಕಾರ್ಮಿಕ ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದ ವಿಶಿಷ್ಟ ಯೋಜನೆಯಾದ 'ಕೂಸಿನ ಮನೆ' ಯೋಜನೆಯ ಲಾಂಛನ ಬಿಡುಗಡೆಗೊಳಿಸಲಾಯಿತು.
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ, ನರೇಗಾ ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳ ಪಾಲನೆ, ಪೋಷಣೆಗೆ ರಾಜ್ಯಾದ್ಯಂತ 40 ಕೋಟಿ ವೆಚ್ಚದಲ್ಲಿ 4,000 ಗ್ರಾಮ ಪಂಚಾಯತಿಗಳಲ್ಲಿ ‘ಕೂಸಿನ ಮನೆ’ - ಶಿಶು ಪಾಲನಾ ಕೇಂದ್ರಗಳನ್ನು ಪ್ರಾರಂಭಿಸಲಿದೆ.
2023-24ರ ಜುಲೈ ಅಯವ್ಯಯ ಭಾಷಣದಲ್ಲಿನ ಘೋಷಣೆಯಂತೆ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಅವರ ಮೂರು ವರ್ಷದ ಒಳಗಿನ ಮಕ್ಕಳನ್ನು ನೋಡಿಕೊಳ್ಳಲು ಜಾರಿಗೆ ತರಲಾಗಿರುವ ಈ ಯೋಜನೆಯು ನಾಡಿನ ಮಹಿಳೆಯರ ಸಬಲತೆಗೆ ನಮ್ಮ ಬದ್ಧತೆಯ ಪ್ರತೀಕ.
Panchayat Raj Commissionerate - Karnataka retweeted
“ಅರಿವೇ ಗುರು” - ಬಸವಣ್ಣ
ಅರಿವು : knowledge, awareness
The teachings of Guru Basavanna have had a profound impact on our Government.
In the next 5 years, the Department of RDPR plans to construct more than 1000 knowledge centers (ಅರಿವು ಕೇಂದ್ರ) throughout Karnataka. These state-of-the-art hybrid libraries aim to ignite curiosity and foster a deeper understanding among young minds. #KarnatakaBudget






















