2026 ನೇ ಸಾಲಿನ ಜಿಲ್ಲಾ ಮಟ್ಟದಲ್ಲಿ ರಾಜ್ಯೋತ್ಸವದ ಆಚರಣೆಯ ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಹಾಗೂ ಪೂರ್ವ ತಯಾರಿ ಮಾಡಿಕೊಳ್ಳುವ ಕುರಿತು ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಶ್ರೀ ಕ್ಷೇತ್ರ ಉಚ್ಚಿಲ ಸಹಯೋಗದೊಂದಿಗೆ ಆಯೋಜಿಸಿರುವ ಅಭಿನಂದನಾ ಸಮಾರಂಭ ಹಾಗೂ ಮಹಿಳಾ ದಸರಾ ಉದ್ಘಾಟನಾ ಸಮಾರಂಭಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳು ಆಗಮಿಸಲಿರುವ ಹಿನ್ನೆಲೆಯಲ್ಲಿ , ಮಾನ್ಯ ಮುಖ್ಯಮಂತ್ರಿಯವರು ಭೇಟಿ ನೀಡಲಿರುವ ಸ್ಥಳಗಳನ್ನು ಪರಿಶೀಲನೆ ನಡೆಸಲಾಯಿತು.
ಇಂದು ಬೈಂದೂರು ತಾಲೂಕಿನ ಬಿಜೂರಿನಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಭಾಗವಹಿಸಲಾಯಿತು. ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಯಿತು. ಪ್ರಜಾಸೇವಾ ಆಂದೋಲನದ ಉದ್ದೇಶ ಮತ್ತು ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಲಾಯಿತು.
ಬ್ರಹ್ಮಾವರ ತಾಲ್ಲೂಕಿನ, ಕುಂದಾಪುರ ವಿಧಾನ ಸಭಾ ಕ್ಷೇತ್ರದ ಪಾಂಡೇಶ್ವರ ಗ್ರಾಮ ಪಂಚಾಯತ ವ್ಯಾಪ್ತಿಯ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಭಾಗವಹಿಸಲಾಯಿತು. ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಪ್ರಜಾಸೇವ ಆಂದೋಲನ ಉದ್ದೇಶವನ್ನು ಸಾರ್ವಜನಿಕರಿಗೆ ತಿಳಿಸಿ ಅಹವಾಲುಗಳನ್ನು ಸ್ವೀಕರಿಸಲಾಯಿತು.